ನವದೆಹಲಿ : 22 ವರ್ಷದ ಸಲಿಂಗಕಾಮಿ ವ್ಯಕ್ತಿಯೊಬ್ಬ ಲೈಂಗಿಕ ನೆರವು ಕೋರಿದ ತನ್ನ ಗೆಳೆಯನನ್ನು ಕೊಲೆ ಮಾಡಿದ ಘಟನೆ ಪೂರ್ವ ದೆಹಲಿಯ ತ್ರಿಲೋಕ್ ಪುರಿ ಪ್ರದೇಶದಲ್ಲಿ ನಡೆದಿದೆ.
ಈ ಇಬ್ಬರು ಸ್ನೇಹಿತರು ಮೂರು ವರ್ಷಗಳಿಂದ ಫೇಸ್ ಬುಕ್ ನಲ್ಲಿ ಪರಿಚಯಯರಾಗಿದ್ದು, ಆಗಾಗ ಭೇಟಿ ಮಾಡುತ್ತಿದ್ದರು. ಆ ವೇಳೆ ಸಂತ್ರಸ್ತ ಆರೋಪಿಯ ಬಳಿ ಲೈಂಗಿಕತೆಗೆ ಸಹಕರಿಸುವಂತೆ ಕೇಳಿಕೊಂಡಿದ್ದಾನೆ. ಇದಕ್ಕೆ ಆತ ಕೋಪಗೊಂಡು ಆತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.
ಬಳಿಕ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.