ಮುಂಬೈ : ಫ್ಯಾಷನ್ ಡಿಸೈನರ್ ಒಬ್ಬ ಚಾರ್ಟೆಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ 32 ವರ್ಷದ ಮಹಿಳೆಯ ಮೇಲೆ ಮಾನಭಂಗ ಎಸಗಿದ ಘಟನೆ ಮುಂಬೈನಲ್ಲಿ ನಡೆದಿದೆ.
ಮಹಿಳೆಗೆ ಆರೋಪಿ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾಗಿದ್ದು, ಇಬ್ಬರು ಪರಸ್ಪರ ಸಂವಹನ ನಡೆಸುತ್ತಿದ್ದರು. ಆ ವೇಳೆ ಆರೋಪಿ ಸಂತ್ರಸ್ತೆಯಿಂದ 10ಸಾವಿರ ರೂ. ಸಾಲ ಪಡೆದಿದ್ದಾನೆ. ಬಳಿಕ ಅದನ್ನು ಹಿಂದಿರುಗಿಸುವ ನೆಪದಲ್ಲಿ ಸಂತ್ರಸ್ತೆಯನ್ನು ಕರೆದು ಮದುವೆಯಾಗುವುದಾಗಿ ಭರವಸೆ ನೀಡಿ ಮಾನಭಂಗ ಎಸಗಿ ನಂತರ ಕಿರುಕುಳ ನೀಡುತ್ತಿದ್ದ.
ಹೀಗಾಗಿ ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.