ಯುವತಿಯೊಬ್ಬಳ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ ಪಕ್ಕದ್ಮನೆ ಯುವಕ

ಶುಕ್ರವಾರ, 25 ಡಿಸೆಂಬರ್ 2020 (07:32 IST)
ಜೈಪುರ : 23 ವರ್ಷದ ಯುವತಿಯೊಬ್ಬಳ ಮೇಲೆ ಯುವಕನೊಬ್ಬ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ಸಂತ್ರಸ್ತ ಯುವತಿಯ ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದು, ಆಕೆ ತನ್ನ ಮನೆಯ ಅಂಗಳದಲ್ಲಿ ಅಜ್ಜಿಯ ಜೊತೆ ಕುಳಿತಿದ್ದಾಗ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದರೆ ದಾಳಿಯ ಹಿಂದಿನ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ