ಹುಡುಗನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಂದ ಯುವಕರು

ಸೋಮವಾರ, 1 ಮಾರ್ಚ್ 2021 (09:09 IST)
ಲಕ್ನೋ : ಇಬ್ಬರು ಯುವಕರು ಹುಡುಗನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ವರದಿಯಾಗಿದೆ.

ಹುಡುಗ ಸ್ಥಳೀಯ ಜಾತ್ರೆಗೆ ಹೋಗಿದ್ದಾಗ ಆತ ನಾಪತ್ತೆಯಾಗಿದ್ದ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದ ಕಾರಣ ಹುಡುಕಾಡುತ್ತಿದ್ದ ಪೊಲೀಸರಿಗೆ ಅಪ್ರಾಪ್ತನ ಶವ ಪತ್ತೆಯಾಗಿದೆ. ಮರಣೋತ್ತರ ವರದಿಯಲ್ಲಿ ಆತನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅನುಮಾನದ ಆಧಾರದ ಮೇಲೆ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾಗ ಅವರು ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ