ಬರ್ತ್ ಡೇ ಗಿಫ್ಟ್ ಕೊಡುವುದಾಗಿ ಕರೆದ ಪುರುಷರಿಬ್ಬರು ಮಹಿಳೆಗೆ ಮಾಡಿದ್ದೇನು?

ಬುಧವಾರ, 3 ಫೆಬ್ರವರಿ 2021 (09:34 IST)
ತಾರ್ಡಿಯೊ : ಮಕ್ಕಳ ಜೊತೆ ಆಟವಾಡುತ್ತಿದ್ದ 32 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಪುರುಷರಿಬ್ಬರು ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಘಟನೆ ನಡೆದಿದೆ.

ಸಂತ್ರಸ್ತೆ ಹುಟ್ಟುಹಬ್ಬದ ಕೇಕ್ ಕತ್ತರಿಸಿ ಮಕ್ಕಳ ಜೊತೆ ಆಟವಾಡುತ್ತಿದ್ದಳು. ಆ ವೇಳೆ ಅಲ್ಲಿಗೆ ಬಂದ ಇಬ್ಬರು ಪುರುಷರು ಆಕೆಗೆ ಬರ್ತ್ ಡೇ ಗಿಫ್ಟ್ ಕೊಡುವುದಾಗಿ ಹೇಳಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಅವರಿಂದ ತಪ್ಪಿಸಿಕೊಂಡು ಬಂದ ಸಂತ್ರಸ್ತೆ ಈ ವಿಚಾರವನ್ನು ತನ್ನ ಮನೆಯವರಿಗೆ ತಿಳಿಸಿದ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ