ಚೆನ್ನೈಗೆ ಅಪ್ಪಳಿಸಿದ ಮೈಚಾಂಗ್ ಚಂಡಮಾರುತ: ತಿರುಚ್ಚಿ ಹೈವೇ ಜಲಾವೃತ

ಸೋಮವಾರ, 4 ಡಿಸೆಂಬರ್ 2023 (13:10 IST)
Photo Courtesy: Twitter
ಚೆನ್ನೈ: ಮೈಚಾಂಗ್ ಚಂಡಮಾರುತ ತಮಿಳುನಾಡಿನ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿದ್ದು, ಚೆನ್ನೈನಲ್ಲಿ ರಸ್ತೆ, ವಿಮಾನ ನಿಲ್ದಾಣ ಜಲಾವೃತವಾಗಿದೆ.

ಚಂಡಮಾರುತದ ಪರಿಣಾಮ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಚೆನ್ನೈನ ವಿಮಾನ ನಿಲ್ದಾಣ ಜಲಾವೃತವಾಗಿದ್ದು, ಕೆಲವು ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ.

ಅಷ್ಟೇ ಅಲ್ಲದೆ, ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲೂ ನೀರು ತುಂಬಿಕೊಂಡಿದ್ದು, ಪ್ರಯಾಣ ಕಷ್ಟವಾಗಿದೆ. ಸೈಕ್ಲೋನ್ ನಿಂದಾಗಿ ಚೆನ್ನೈನಲ್ಲಿ ಪ್ರವಾಹ ಪರಿಸ್ಥಿತಿಯಿದ್ದು ಜನರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಜನರು ಮನೆಯಿಂದ ಹೊರಬರಲಾರದ ಸ್ಥಿತಿ ಎದುರಾಗಿದೆ. ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳು ನೀರಿನಲ್ಲಿ ತೇಲಿಕೊಂಡು ಹೋಗುವಂತಹ ದೃಶ್ಯಗಳು ಕಂಡುಬಂದಿದೆ. ಮೈಚಾಂಗ್ ಚಂಡಮಾರುತದ ಪರಿಣಾಮ ರಾಜ್ಯಕ್ಕೂ ತಟ್ಟಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣ, ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ