ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ?!
ಕಿಡ್ನಿಗೆ ಸಂಬಂಧಿಸಿದಂತೆ ಸಮಸ್ಯೆಯಿಂದ ಅರುಣ್ ಜೇಟ್ಲಿ ಬಳಲುತ್ತಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸೂಚಿಸಿರುವುದಾಗಿ ವರದಿಯಲ್ಲಿ ಹೇಳಲಾಗಿದೆ. 65 ವರ್ಷದ ಸಚಿವ ಜೇಟ್ಲಿ ಇನ್ನೂ ಆಸ್ಪತ್ರೆಗೆ ದಾಖಲಾಗಿಲ್ಲ. ಆದರೆ ಯಾವುದೇ ಸಾರ್ವಜನಿಕ ಸಭೆಗಳಿಗೆ ಹೋಗದಂತೆ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ.
2014 ರಲ್ಲಿ ಒಮ್ಮೆ ಇದೇ ರೀತಿ ಸಚಿವ ಜೇಟ್ಲಿಗೆ ಅನಾರೋಗ್ಯ ಸಮಸ್ಯೆ ಕಾಡಿತ್ತು. ಅದಾದ ಬಳಿಕ ಮತ್ತೆ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಕಳೆದ ಕೆಲವು ದಿನಗಳಿಂದ ಅವರು ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.