ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ

ಬುಧವಾರ, 23 ಫೆಬ್ರವರಿ 2022 (09:20 IST)
ಹೈದರಾಬಾದ್: 16 ವರ್ಷದ ಅಪ್ರಾಪ್ತೆಯ ಅಪಹರಿಸಿ ಇಬ್ಬರು ಯುವಕರು ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದೆ.
 

ಹಾಲು ತರಲೆಂದು ಮನೆಯಿಂದ ಹೊರಹೋಗಿದ್ದ ಬಾಲಕಿಯನ್ನು ಆರೋಪಿಗಳಲ್ಲೊಬ್ಬ ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದ. ಆಕೆ ಪ್ರತಿರೋಧಿಸಿದಾಗ ಅಪಹರಿಸಿದ ಆರೋಪಿ ತನ್ನ ಮನೆಗೆ ಕರೆದೊಯ್ದಿದ್ದ. ಬಳಿಕ ತನ್ನ ಮತ್ತೊಬ್ಬ ಸ್ನೇಹಿತನನ್ನು ಕರೆಸಿಕೊಂಡು ಅತ್ಯಾಚಾರವೆಸಗಿದ್ದಾನೆ.

ಕೃತ್ಯದ ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ತಕ್ಕ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದರು. ಆದರೆ ಸಂತ್ರಸ್ತೆ ನಡೆದ ವಿಚಾರವನ್ನು ತಾಯಿ ಬಳಿ ಬಾಯ್ಬಿಟ್ಟಿದ್ದು, ಬಳಿಕ ಇಬ್ಬರೂ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಇದೀಗ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ