ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಗ್ಯಾಂಗ್‌ರೇಪ್ ಎಸಗಿದ ಕಾಮುಕರು

ಗುರುವಾರ, 30 ಜುಲೈ 2015 (18:29 IST)
14 ವರ್ಷದ ಬಾಲಕಿಯನ್ನು ಅಪಹರಿಸಿದ ನಾಲ್ಕು ಮಂದಿ ಆರೋಪಿಗಳು ಚಲಿಸುತ್ತಿರುವ ಕಾರಿನಲ್ಲಿಯೇ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಖಾಟೋಲಿ ಪ್ರದೇಶದಲ್ಲಿ ನಡೆದಿದೆ.
 
9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ತನ್ನ ಕಿರಿಯ ಸಹೋದರಿಯೊಂದಿಗೆ ಶಾಲೆಗೆ ತೆರಳುತ್ತಿರುವಾಗ ಆರೋಪಿಗಳು ಆಕೆಯನ್ನು ಅಪಹರಿಸಿ ಕಾರಿನಲ್ಲಿಯೇ ಗ್ಯಾಂಗ್‌ರೇಪ್ ಎಸಗಿದ್ದಾರೆ. 
 
ನದೀಮ್ ಎನ್ನುವ ಆರೋಪಿ ಬಾಲಕಿಗೆ ಶಾಲೆಗೆ ಲಿಫ್ಟ್ ಕೊಡುವುದಾಗಿ ನಂಬಿಸಿದ್ದಾನೆ. ಕಿರಿಯ ಸಹೋದರಿಯನ್ನು ಶಾಲೆಗೆ ಬಿಟ್ಟ ನಂತರ ಮೀರತ್ ರಸ್ತೆಗೆ ತೆರಳಿದ ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. 
 
ಪ್ರಜ್ಞಾವಸ್ಥೆಯಲ್ಲಿದ್ದ ಬಾಲಕಿಯನ್ನು ಲಾವಾಡ್-ಮಸೂರಿ ರಸ್ತೆಯಲ್ಲಿರುವ ಖಾರ್‌ದೌನಿ ಪ್ರದೇಶದಲ್ಲಿ ಎಸೆದು ಪರಾರಿಯಾಗಿದ್ದಾರೆ.
 
ಬಾಲಕಿಯ ಪೋಷಕರು ಪೊಲೀಸರಿಗೆ ನೀಡಿದ ದೂರಿನ ಮೇರೆಗೆ ಆರೋಪಿ ನದೀಮ್‌ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇತರ ಮೂವರು ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  
 
 
 

ವೆಬ್ದುನಿಯಾವನ್ನು ಓದಿ