ಗಂಡು ಮಗುವಿಗೆ ಜನ್ಮವಿತ್ತ ಅಪ್ರಾಪ್ತ ಬಾಲಕಿ: ಲೈಂಗಿಕ ದೌರ್ಜನ್ಯ ಕೇಸ್ ದಾಖಲು

ಭಾನುವಾರ, 4 ಏಪ್ರಿಲ್ 2021 (09:23 IST)
ಚಂಢೀಘಡ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಶೀಲಕೆಡಿಸಿದ ಪರಿಣಾಮ ಆಕೆಯೀಗ ಗಂಡುಮಗುವಿಗೆ ಜನ್ಮವಿತ್ತಿದ್ದಾಳೆ. ಇದೀಗ ಆರೋಪಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಪಂಜಾಬ್ ನಲ್ಲಿ ಈ ಘಟನೆ ನಡೆದಿದೆ. ವಲಸೆ ಕಾರ್ಮಿಕನೊಬ್ಬ 15 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಶೀಲಕೆಡಿಸಿದ್ದ. ಅಲ್ಲದೆ ಆಕೆಯೊಂದಿಗೆ ನಿರಂತರವಾಗಿ ದೈಹಿಕ ಸಂಪರ್ಕವಿಟ್ಟುಕೊಂಡಿದ್ದ. ಇದರಿಂದ ಆಕೆ ಗರ್ಭಿಣಿಯಾಗಿದ್ದು, ಇದೀಗ ಗಂಡು ಮಗುವಿಗೆ ಜನ್ಮವಿತ್ತಿದ್ದಾಳೆ.

ಆದರೆ ಈಗ ಆರೋಪಿ ಬಾಲಕಿಯನ್ನು ಮದುವೆಯಾಗಲು ನಿರಾಕರಿಸುತ್ತಿದ್ದಾನೆ. ಹೀಗಾಗಿ ಬಾಲಕಿ ಪೊಲೀಸರಿಗೆ ದೂರು ನೀಡಿದ್ದಾಳೆ. ಇದೀಗ ಪೊಲೀಸರು ಆತನ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ