ಎಂಟು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸೋದರಮಾವ

ಶನಿವಾರ, 28 ಮಾರ್ಚ್ 2015 (15:15 IST)
ನಗರದ ಹಫೀಜ್ ‌ಗಂಜ್ ಪ್ರದೇಶದಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಆಕೆಯ ಸಹೋದರ ಮಾವನೇ ಲೈಂಗಿಕ ಕಿರುಕುಳ ನೀಡಿದ ಘಟನೆ ವರದಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.  

ಆರೋಪಿ ರಾಜೇಂದ್ರ (25) ಬಾಲಕಿಯ ತಾಯಿಯ ಸಹೋದರನಾಗಿದ್ದು, ಬಾಲಕಿಗೆ ಸ್ವೀಟ್ಸ್ ಮತ್ತು ಚಾಕೋಲೇಟ್‌ಗಳ ಆಮಿಷ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಾಲಕಿಯ ಕುಟುಂಬದವರು ಆರೋಪಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ