ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆ

ಮಂಗಳವಾರ, 12 ಏಪ್ರಿಲ್ 2022 (12:00 IST)
ತೆಲಂಗಾಣ: ಅಪ್ರಾಪ್ತ ಯುವತಿ ಮೇಲೆ ಕಾಮುಕರು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

17 ವರ್ಷದ ಯುವತಿ ಗಾಳಿ ಸೇವನೆಗೆ ಹೋಗಿದ್ದಾಗ ದುಷ್ಕರ್ಮಿಗಳು ಆಕೆಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದಾರೆ. ಈ ಸಂಬಂಧ ಯುವತಿಯ ಸ್ನೇಹಿತನದ್ದೇ ಕೈವಾಡವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮರಣೋತ್ತರ ಪರೀಕ್ಷೆಯಲ್ಲಿ ಯುವತಿ ಮೇಲೆ ಅತ್ಯಾಚಾರವಾಗಿರುವುದು ದೃಢಪಟ್ಟಿದೆ. ಅಲ್ಲದೆ, ಯುವತಿಯ ತಲೆಭಾಗಕ್ಕೆ ತೀವ್ರ ಪೆಟ್ಟಾಗಿರುವುದು ಕಂಡುಬಂದಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ