ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ದುರುಳರು ಅರೆಸ್ಟ್

ಶುಕ್ರವಾರ, 22 ಏಪ್ರಿಲ್ 2022 (09:19 IST)
ಜೈಪುರ: 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ನಾಲ್ವರು ಯುವಕರನ್ನು ರಾಜಸ್ಥಾನ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸಾಮೂಹಿಕ ಅತ್ಯಾಚಾರವೆಸಗಿದ ಕಾಮುಕರು ಬಳಿಕ ಘಟನೆಯನ್ನು ಯಾರಲ್ಲೂ ಹೇಳದಂತೆ ಬೆದರಿಕೆ ಹಾಕಿದ್ದರು. ಎರಡು ದಿನಗಳ ಬಳಿಕ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ಅದರಂತೆ ನಾಲ್ವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ