16 ರ ಯುವಕನಿಂದ ಅತ್ಯಾಚಾರಕ್ಕೊಳಗಾದ ಬಾಲಕಿ ಈಗ ಗರ್ಭಿಣಿ

ಬುಧವಾರ, 6 ಜುಲೈ 2022 (11:00 IST)
ನವದೆಹಲಿ: 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ 16 ವರ್ಷದ ಅಪ್ರಾಪ್ತ ಆಕೆ ಗರ್ಭಿಣಿಯಾಗುವಂತೆ ಮಾಡಿದ್ದಾನೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ಬಾಲಕಿಯ ಸಂಬಂಧಿಕನಾಗಿದ್ದ. ಕುಟುಂಬಸ್ಥರ ಮದುವೆಯೊಂದಕ್ಕೆ ಹೋಗಿದ್ದಾಗ ಆರೋಪಿ ಕೃತ್ಯವೆಸಗಿದ್ದಾನೆ. ಆ ಸಂದರ್ಭದಲ್ಲಿ ಬಾಲಕಿ ಈ ವಿಚಾರವನ್ನು ಯಾರ ಬಳಿಯೂ ಹೇಳಿರಲಿಲ್ಲ.

ಆದರೆ ಕೆಲವು ದಿನಗಳ ಬಳಿಕ ಕೆಳಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ತಾಯಿ ವೈದ್ಯರ ಬಳಿ ಕರೆದೊಯ್ದಿದ್ದರು. ಈ ವೇಳೆ ಆಕೆ ಗರ್ಭಿಣಿ ಎನ್ನುವುದು ತಿಳಿದುಬಂದಿದೆ. ಆಗ ನಡೆದ ವಿಚಾರವನ್ನು ತಿಳಿಸಿದ್ದಾಳೆ. ತಕ್ಷಣವೇ ಪೊಲೀಸರಿಗೆ ದೂರು ನೀಡಲಾಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ