ಕಾರಿನಲ್ಲೇ ನಡೆಯಿತು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಶನಿವಾರ, 16 ಜುಲೈ 2022 (10:18 IST)
ನವದೆಹಲಿ: 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಚಲಿಸುತ್ತಿದ್ದ ಕಾರಿನಲ್ಲೇ ದುರುಳರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಮನೆಯಿಂದ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿದ್ದ ಕಾಮುಕರು ಸುಮಾರು 44 ಕಿ. ಮೀ.ಗಳಷ್ಟು ಕಾರು ಚಲಾಯಿಸಿಕೊಂಡು ಹೋಗಿದ್ದು, ಈ ವೇಳೆ ಅತ್ಯಾಚಾರವೆಸಗಿದ್ದಾರೆ. ಬಾಲಕಿಗೆ ಜ್ಯೂಸ್ ನಲ್ಲಿ ಮತ್ತು ಬರಿಸುವ ಔಷಧಿ ನೀಡಲಾಗಿತ್ತು.

ಒಂದೇ ಕಡೆ ನಿಂತರೆ ಯಾರಿಗಾದರೂ ಗೊತ್ತಾಗಬಹುದು ಎಂಬ ಕಾರಣಕ್ಕೆ ನಿರಂತರವಾಗಿ ಕಾರು ಚಲಾಯಿಸುತ್ತಾ ಅತ್ಯಾಚಾರವೆಸಗಿದ್ದಾರೆ. ಹೀಗಾಗಿ ಬಾಲಕಿ ಸಹಾಯಕ್ಕಾಗಿ ಕೂಗಿದರೂ ಯಾರಿಗೂ ಗೊತ್ತಾಗಿರಲಿಲ್ಲ. ಅಲ್ಲದೆ ಘಟನೆಯ ವಿಡಿಯೋ ಕೂಡಾ ಮಾಡಿದ್ದರು. ಅಸ್ವಸ್ಥಗೊಂಡ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ