ತಮಿಳುನಾಡು ನೂತನ ಸಿಎಂ ಆಗಿ ಎಂಕೆ ಸ್ಟಾಲಿನ್ ಪ್ರಮಾಣ ವಚನ

ಶುಕ್ರವಾರ, 7 ಮೇ 2021 (10:09 IST)
ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

 
ಚೆನ್ನೈನ ರಾಜಭವನದಲ್ಲಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಸ್ಟಾಲಿನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಅವರ ಜೊತೆಗೆ 33 ಸದಸ್ಯರ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ.

ಕರುಣಾನಿಧಿ ಅವರ ಪುತ್ರ ಸ್ಟಾಲಿನ್ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದಾರೆ. ದಶಕಗಳ ಕಾಲ ಡಿಎಂಕೆ ಅಧ್ಯಕ್ಷರಾಗಿ, ವಿಪಕ್ಷ ನಾಯಕರಾಗಿ ಕಾರ್ಯನಿರ್ವಹಿಸಿದ ಅನುಭವ ಅವರದ್ದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ