ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯುವುದೇ ನಮ್ಮ ಗುರಿ: ಸ್ಟಾಲಿನ್

Krishnaveni K

ಶನಿವಾರ, 27 ಜನವರಿ 2024 (10:54 IST)
ಚೆನ್ನೈ: ದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯುವುದೇ ನಮ್ಮ ಗುರಿಯಾಗಬೇಕು ಎಂದು ತಮಿಳುನಾಡು ಸಿಎಂ, ಡಿಎಂಕೆ ನಾಯಕ ಸ್ಟಾಲಿನ್ ಹೇಳಿದ್ದಾರೆ.

ತಿರುಚಿನಾಪಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಟಾಲಿನ್,  ಈ ದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯುವುದೇ ನಮ್ಮ ಗುರಿಯಾಗಬೇಕು. ಇದಕ್ಕಾಗಿ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.

ಪ್ರತಿಯೊಬ್ಬರಿಗೂ ಒಂದು ಗುರಿ ಇರಬೇಕು. ಅದು ಬಿಜೆಪಿ ಸೋಲಿಸುವುದು ಆಗಿರಬೇಕು. ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಉಳಿಯಲ್ಲ ಎಂದು ಸ್ಟಾಲಿನ್ ಕರೆ ಕೊಟ್ಟಿದ್ದಾರೆ. ಬಿಜೆಪಿ ವಿರುದ್ಧವಾಗಿ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಇಂಡಿಯಾ ಎಂಬ ಒಕ್ಕೂಟ ಮಾಡಿಕೊಂಡಿದೆ.

ಆದರೆ ಸೀಟು ಹಂಚಿಕೆ ವಿಚಾರದಲ್ಲಿ ಈ ಒಕ್ಕೂಟದಲ್ಲೇ ಭಿನ್ನಾಭಿಪ್ರಾಯ ಮೂಡಿದೆ. ಇತ್ತೀಚೆಗೆ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, ಪಂಜಾಬ್ ನಲ್ಲಿ ಆಪ್ ಪಕ್ಷ ಲೋಕಸಭೆ ಚುನಾವಣೆಗೆ ತಮ್ಮ ಪಕ್ಷ ಈ ರಾಜ್ಯಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದಿದ್ದರು.

ವಿಪಕ್ಷಗಳ ಒಕ್ಕೂಟದಲ್ಲಿ ಈ ರೀತಿಯ ಭಿನ್ನಾಭಿಪ್ರಾಯಗಳಿಂದ ಮತ ವಿಭಜನೆಯಾಗಲಿದೆ. ಇದು ಬಿಜೆಪಿಗೆ ಲಾಭವಾಗಲಿದೆ. ಈ ಕಾರಣಕ್ಕೇ ಸ್ಟಾಲಿನ್ ಈ ರೀತಿ ಕರೆಕೊಟ್ಟಿದ್ದಾರೆ. ಡಿಎಂಕೆ ಕೂಡಾ ಇಂಡಿಯಾ ಒಕ್ಕೂಟಕ್ಕೆ ಬೆಂಬಲ ನೀಡುತ್ತಿದೆ. ತಮಿಳುನಾಡಿನಲ್ಲಿ ಇತ್ತೀಚೆಗೆ ಬಿಜೆಪಿ ಚಿಗುರೊಡೆಯುತ್ತಿದೆ. ಹೀಗಾಗಿ ಸ್ಟಾಲಿನ್ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ