ಮೋದಿ 3.0 ಮೊದಲ ಅಧಿವೇಶನ ಇಂದಿನಿಂದ ಶುರು: ವಿಪಕ್ಷಗಳಿಂದ ನೀಟ್ ಅಕ್ರಮ ಅಸ್ತ್ರ ಪ್ರಯೋಗ ಗ್ಯಾರಂಟಿ

Krishnaveni K

ಸೋಮವಾರ, 24 ಜೂನ್ 2024 (09:44 IST)
ನವದೆಹಲಿ: ಮೋದಿ 3.0 ದ ಮೊದಲ ಸಂಸತ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಮೊದಲ ಅಧಿವೇಶನದಲ್ಲೇ ನೀಟ್ ಪರೀಕ್ಷೆ ಅಕ್ರಮ ಕುರಿತು ವಿಪಕ್ಷಗಳು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧತೆ ನಡೆಸಿವೆ.

ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಅವರನ್ನು ಆಯ್ಕೆ ಮಾಡಿರುವುದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಮೊದಲ ಅಧಿವೇಶನದಲ್ಲೇ ಸರ್ಕಾರದ ಮೇಲೆ ದಾಳಿ ಮಾಡಲು ವಿಪಕ್ಷಗಳು ಸಜ್ಜಾಗಿವೆ. ಜೂನ್ 27 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮೊದಲ ಎರಡು ದಿನ ಹಂಗಾಮಿ ಸ್ಪೀಕರ್ ಅಧಿಕಾರ ಸ್ವೀಕಾರ, ನೂತನ ಸಂಸದರಿಂದ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ಬುಧವಾರ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮೂಲಗಳ ಪ್ರಕಾರ ಬಿಜೆಪಿಯವರೇ ಸ್ಪೀಕರ್ ಆಗುವ ಸಾಧ್ಯತೆಯಿದೆ. ಇದಕ್ಕೆ ಮಿತ್ರ ಪಕ್ಷ ಜೆಡಿಯು, ಟಿಡಿಪಿ ಸಹಮತವೂ ಇದೆ.

ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಪ್ರಧಾನಿ ಮೋದಿ ಜುಲೈ 2-3 ರಂದು ಉತ್ತರ ನೀಡಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆದ್ದು ಹೊಸದಾಗಿ ಸಂಸದರಾಗಿರುವ 543 ಸಂಸದರೂ ಈಗ ಕಲಾಪದಲ್ಲಿ ಭಾಗಿಯಾಗಲು ದೆಹಲಿಗೆ ತಲುಪಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ