ಅಮಿತ್ ಶಾ ಪುತ್ರ ಜಯ್ ಶಾಹ್ ಕೇವಲ ಮೂರು ತಿಂಗಳಲ್ಲಿ 50 ಸಾವಿರ ರೂಪಾಯಿಗಳಿಂದ 80 ಕೋಟಿ ರೂಪಾಯಿಗಳನ್ನು ಸಂಪಾದಿಸಿದ್ದಾರೆ. ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆ ಎಂದು ಗುಡುಗಿದ್ದ ಮೋದಿಗೆ ಅಮಿತ್ ಶಾ ಕಂಡರೆ ಭಯವಾಗಿದೆ. ಅಮಿತ್ ಶಾ ಬಗ್ಗೆ ಒಂದೇ ಒಂದು ಹೇಳಿಕೆ ನೀಡಿಲ್ಲ. ಪ್ರಧಾನಿ ಮೋದಿ ತಮ್ಮ ಯಾವುದೇ ಭಾಷಣದಲ್ಲಿ ಭ್ರಷ್ಟಾಚಾರದ ವಿಷಯವೆತ್ತಿಲ್ಲ ಎಂದು ಲೇವಡಿ ಮಾಡಿದರು.
ಪ್ರಧಾನಿ ಮೋದಿಯವರ ನೋಟು ನಿಷೇಧ, ಜಿಎಸ್‌ಟಿ ಜಾರಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್, ಕಳೆದ 2014ರ ಲೋಕಸಭೆ ಚುನಾವಣೆಯಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನ ಬ್ಯಾಂಕ್ ಖಾತೆಯಲ್ಲಿ 15 ಲಕ್ಷ ರೂಪಾಯಿಗಳನ್ನು ಜಮಾ ಮಾಡುವುದಾಗಿ ಘೋಷಿಸಿದ್ದರು. ಆದರೆ, ಅಧಿಕಾರಕ್ಕೆ ಬಂದ ನಾಲ್ಕು ವರ್ಷಗಳು ಕಳೆದರೂ ಯಾವೊಬ್ಬ ನಾಗರಿಕನಿಗೆ 15 ಪೈಸೆ ಕೂಡಾ ಹಾಕಿಲ್ಲ ಎಂದರು.
ಪಾಕಿಸ್ತಾನ, ಕಾಂಗ್ರೆಸ್ ಪಕ್ಷದೊಂದಿಗೆ ಶಾಮೀಲಾಗಿ ಗುಜರಾತ್ ಚುನಾವಣೆಯಲ್ಲಿ ಮಧ್ಯಪ್ರವೇಶ ಮಾಡುತ್ತಿದೆ ಎನ್ನುವ ಪ್ರಧಾನಿ ಮೋದಿಗೆ ಹೇಳಿಕೆಗೆ ಟಾಂಗ್ ನೀಡಿದ ರಾಹುಲ್, ಗುಜರಾತ್‌ನಲ್ಲಿ ಚುನಾವಣೆ ನಡೆಯುತ್ತಿವೆ. ಮೋದಿ ಮಾತ್ರ ಜಪಾನ್, ಅಫ್ಘಾನಿಸ್ತಾನ್ ಮತ್ತು ಪಾಕಿಸ್ತಾನದ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.