ಬೆಳಗಾವಿಯಲ್ಲಿ ಮನೆ ಕುಸಿದು 7 ಮಂದಿ ಸಾವು: ಪರಿಹಾರ ಘೋಷಿಸಿದ ಮೋದಿ
ಗುರುವಾರ, 7 ಅಕ್ಟೋಬರ್ 2021 (11:59 IST)
ಬೆಂಗಳೂರು, ಅ.7 : ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಮನೆ ಕುಸಿದು ಏಳು ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಕಳೆದ ರಾತ್ರಿ ಬೆಳಗಾವಿಯಲ್ಲಿ ಭಾರೀ ಮಳೆಯಿಂದಾಗಿ ಮನೆ ಕುಸಿದು ಅನೇಕರು ಸಾವನ್ನಪ್ಪಿದ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ಆಘಾತವಾಯಿತು. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಟ್ವಿಟ್ಟರ್ನಲ್ಲಿ ಘೋಷಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಪ್ರಧಾನಿಯವರು ಸಾಂತ್ವನ ಹೇಳಿ ಅಗಲಿದವರಿಗೆ ಭಗವಂತನು ಸದ್ಗತಿ ನೀಡಿ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.