ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಎರಡು ಪ್ರಶಸ್ತಿಗಳನ್ನು ಘೋಷಿಸಿದ ಪ್ರಧಾನಿ ಮೋದಿ

ಮಂಗಳವಾರ, 21 ಜೂನ್ 2016 (13:24 IST)
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಎರಡು ಪ್ರಶಸ್ತಿಗಳನ್ನು ನೀಡುವುದಾಗಿ ಘೋಷಿಸಿದ್ದಾರೆ.
 
ಎರಡನೇ ಅಂತಾರಾಷ್ಟ್ರೀಯ ದಿನಾಚರಣೆ ಅಂಗವಾಗಿ ಕ್ಯಾಪಿಟೋಲ್ ಕಾಂಪ್ಲೆಕ್ಸ್‌ನಲ್ಲಿ ಯೋಗ ಆಚರಣೆಯಲ್ಲಿ ಪಾಲ್ಗೊಂಡಿದ್ದ 30 ಸಾವಿರ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು.  
 
ಕೇಂದ್ರ ಸರಕಾರದ ಪರವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ  .ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗಾಗಿ ಅಂತಾರಾಷ್ಟ್ರೀಯ ಪ್ರಶಸ್ತಿ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದವರಿಗಾಗಿ ರಾಷ್ಟ್ರಪ್ರಶಸ್ತಿ ನೀಡಲಾಗುವುದು ಎಂದು ಘೋಷಿಸಿದರು.
 
ಈ ಪ್ರಶಸ್ತಿಗಳನ್ನು ಅಂತಾರಾಷ್ಟ್ರೀಯ ಯೋಗ ಪ್ರಶಸ್ತಿ ಮತ್ತು ರಾಷ್ಟ್ರೀಯ ಯೋಗ ಪ್ರಶಸ್ತಿ ಎಂದು ಹೆಸರಿಡಲಾಗಿದೆ ಎಂದು ತಿಳಿಸಿದ್ದಾರೆ. 
 
ಅಂತಾರಾಷ್ಟ್ರೀಯ ಯೋಗ ಪ್ರಶಸ್ತಿ ಮತ್ತು ರಾಷ್ಟ್ರೀಯ ಯೋಗ ಪ್ರಶಸ್ತಿಗಳಿಗಾಗಿ ಸಮಿತಿಯೊಂದನ್ನು ರಚಿಸಲಾಗಿದ್ದು, ಪ್ರಶಸ್ತಿ ವಿತರಣೆಗಾಗಿ ನಿಯಮ, ನೀತಿಗಳನ್ನು ಜಾರಿಗೊಳಿಸಲಾಗುವುದು. ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗಾಗಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ