ಅಭಿವೃದ್ಧಿಗೆ ಯುಪಿಎಗಿಂತ ಮೋದಿ ದುಪ್ಪಟ್ಟು ವೆಚ್ಚ

ಬುಧವಾರ, 25 ಮೇ 2022 (10:38 IST)
ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 8 ರು. ಹಾಗೂ ಡೀಸೆಲ್ ಮೇಲಿನ ಸುಂಕವನ್ನು 6 ರು. ಕಡಿತ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು, ‘ಇದು ಯಾತಕ್ಕೂ ಸಾಲದು’ ಎಂದು ಟೀಕಿಸುತ್ತಿರುವ ಕಾಂಗ್ರೆಸ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ತಿರುಗೇಟು ನೀಡಿದ್ದಾರೆ.
 
2004ರಿಂದ 2014ರವರೆಗೆ ಅಭಿವೃದ್ಧಿ ಹಾಗೂ ಸಬ್ಸಿಡಿಗೆ ಯುಪಿಎ ಮಾಡಿದ ಖರ್ಚಿಗಿಂತ 2014ರಿಂದ 2022ರವರೆಗೆ ನರೇಂದ್ರ ಮೋದಿ ಸರ್ಕಾರ ಮಾಡಿದ ವೆಚ್ಚ ಹೆಚ್ಚೂ ಕಡಿಮೆ 2 ಪಟ್ಟು ಹೆಚ್ಚಿದೆ ಎಂದು ಅಂಕಿ-ಅಂಶ ಸಮೇತ ತಿರುಗೇಟು ನೀಡಿದ್ದಾರೆ.

2020ರ ಮೇ 1ರಿಂದ 2022ರವರೆಗಿನ ಪೆಟ್ರೋಲ್ ಬೆಲೆಯನ್ನು ಭಾನುವಾರ ಪ್ರಸ್ತಾಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಹೆಸರಿನಲ್ಲಿ ಬಿಜೆಪಿ ಜನರನ್ನು ವಂಚಿಸುತ್ತಿದೆ. ಇದೊಂದು ಜನರನ್ನು ಮರಳು ಮಾಡುವ ತಂತ್ರವಾಗಿದೆ. ಹಣದುಬ್ಬರ ದಾಖಲೆ ಮಟ್ಟಕ್ಕೆ ತಲುಪಿರುವ ಹಿನ್ನೆಲೆಯಲ್ಲಿ ಜನರಿಗೆ ನೈಜ ಪರಿಹಾರ ದೊರೆಯಬೇಕಿದೆ.

ಸರ್ಕಾರ ಜನರನ್ನು ಮೂರ್ಖರನ್ನಾಗಿಸುವುದನ್ನು ನಿಲ್ಲಿಸಬೇಕು’ ಎಂದಿದ್ದರು. ಅಲ್ಲದೆ, ‘ಇನ್ನು ಪೆಟ್ರೋಲ್ ಬೆಲೆ ನಿತ್ಯ 80 ಪೈಸೆ, 30 ಪೈಸೆಯಂತೆ ವಿಕಾಸವಾಗಲಿದೆ’ ಎಂದು ಲೇವಡಿ ಮಾಡಿದ್ದರು.

ಈ ಬಗ್ಗೆ ನಿರ್ಮಲಾ ಅವರು ಸರಣಿ ಟ್ವೀಟ್ಗಳನ್ನು ಮಾಡಿ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ್ದಾರೆ. ‘2014ರಿಂದ 2022ರವರೆಗೆ ಮೋದಿ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ 90.09 ಲಕ್ಷ ಕೋಟಿ ರು. ಖರ್ಚು ಮಾಡಿದೆ.

ಆದರೆ ಇದಕ್ಕೆ ತದ್ವಿರುದ್ಧವಾಗಿ 2004ರಿಂದ 2014ವರೆಗೆ ಅಧಿಕಾರದಲ್ಲಿದ್ದ ಮನಮೋಹನ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಕೇವಲ 49.2 ಲಕ್ಷ ಕೋಟಿ ರು. ವೆಚ್ಚ ಮಾಡಿತ್ತು ಎಂದು ನಿರ್ಮಲಾ ಟ್ವೀಟ್ ಮಾಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ