ನವದೆಹಲಿ : ದೇಶಾದ್ಯಂತ 508 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 55, ಬಿಹಾರದಲ್ಲಿ 49, ಮಹಾರಾಷ್ಟ್ರದಲ್ಲಿ 44, ಮಶ್ಚಿಮ ಬಂಗಾಳದಲ್ಲಿ 37, ಮಧ್ಯ ಪ್ರದೇಶದಲ್ಲಿ 34, ಅಸ್ಸಾಂನಲ್ಲಿ 32, ಒಡಿಶಾದಲ್ಲಿ 25, ಪಂಜಾಬ್ನಲ್ಲಿ 22, ಗುಜರಾತ್ ಮತ್ತು ತೆಲಂಗಾಣದಲ್ಲಿ ತಲಾ 21, ಜಾರ್ಖಂಡ್ನಲ್ಲಿ 20, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ 18, ಹರಿಯಾಣದಲ್ಲಿ 15, ಕರ್ನಾಟಕದಲ್ಲಿ 13 ಸೇರಿದಂತೆ ದೇಶಾದ್ಯಂತ ಒಟ್ಟು 508 ರೈಲ್ವೆ ನಿಲ್ದಾಣಗಳು ಇದರಲ್ಲಿ ಸೇರಿವೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.
ದೇಶದ ರೈಲ್ವೆ ನಿಲ್ದಾಣಗಳನ್ನು ಹೈಟೆಕ್ ಮಾಡುವ ನಿಟ್ಟಿನಲ್ಲಿ ಅಮೃತ್ ಭಾರತ್ ನಿಲ್ದಾಣ ಯೋಜನೆಯ ಮೊದಲ ಹಂತ ಇದಾಗಿದ್ದು, ಇದಕ್ಕಾಗಿ ಕರ್ನಾಟಕದಿಂದ ಆಯ್ಕೆಯಾದ 55 ನಿಲ್ದಾಣಗಳ ಪೈಕಿ 13 ನಿಲ್ದಾಣಗಳಿಗೆ ಇಂದು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿದೆ.