ಉಕ್ರೇನ್-ರಷ್ಯಾ ಸಂಧಾನಕ್ಕೆ ಮೋದಿ

ಶನಿವಾರ, 2 ಏಪ್ರಿಲ್ 2022 (11:53 IST)
ನವದೆಹಲಿ : ರಷ್ಯಾ-ಉಕ್ರೇನ್ ನಡುವಣ ಬಿಕ್ಕಟ್ಟು ಪರಿಹಾರಕ್ಕೆ ಯಾವುದೇ ರೀತಿಯಲ್ಲಿ ಮಧ್ಯಸ್ಥಿಕೆ ವಹಿಸಲು ಭಾರತ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಷ್ಯಾ ವಿದೇಶಾಂಗ ಸಚಿವ ಸೆರ್ಗೇಯ್ ಲಾವ್ರೊವ್ ಅವರಿಗೆ ತಿಳಿಸಿದ್ದಾರೆ.
 
ಇದೇ ವೇಳೆ ಉಕ್ರೇನ್ ಮೇಲಿನ ಯುದ್ಧವನ್ನು ಕೂಡಲೇ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ್ದ ಲಾವ್ರೊವ್  ಭಾರತವು ಸಮಸ್ಯೆಗೆ ಪರಿಹಾರವನ್ನು ಒದಗಿಸುವ ಉದ್ದೇಶದಿಂದ ಮಧ್ಯಸ್ಥಿಕೆ ವಹಿಸಲು ಇಚ್ಛಿಸಿದರೆ,

ಅಂತಾರಾಷ್ಟ್ರೀಯ ಸಮಸ್ಯೆಗಳಿಗೆ ನ್ಯಾಯಸಮ್ಮತವಾದ ಮತ್ತು ತರ್ಕಬದ್ಧವಾದ ವಿಧಾನದ ಮೂಲಕ ಪರಿಹಾರ ನೀಡುವುದಾದರೆ ಮಧ್ಯಸ್ಥಿಕೆ ವಹಿಸುವುದನ್ನು ರಷ್ಯಾ ಬೆಂಬಲಿಸುತ್ತದೆ’ ಎಂದು ಹೇಳಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ