ಪ್ರಶಸ್ತಿ ಹಣವನ್ನು ನಮಾಮಿ ಗಂಗೆ ಯೋಜನೆಗೆ ನೀಡಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.ಪ್ರಶಸ್ತಿ ಸ್ವೀಕರಿಸಿದ ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಪ್ರಶಸ್ತಿ ನೀಡಿದ್ದಕ್ಕೆ ಹೃತ್ಪೂರ್ವಕ ಧನ್ಯವಾದಗಳು.
ಈ ದಿನ ನನಗೆ ಬಹಳ ಮುಖ್ಯವಾದ ಹಾಗೂ ನೆನಪಿನಲ್ಲಿರುವ ದಿನ. ಸ್ವಾತಂತ್ರ್ಯ ಹೋರಾಟದಲ್ಲಿ ತಿಲಕ್ರ ಪಾತ್ರವನ್ನು ಪದಗಳಲ್ಲಿ ಅಥವಾ ಕೆಲವು ಘಟನೆಗಳ ಮೂಲಕ ಹೇಳಲು ಸಾಧ್ಯವಿಲ್ಲ. ಈ ಪ್ರಶಸ್ತಿಯನ್ನ ದೇಶದ 140 ಕೋಟಿ ಜನರಿಗೆ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.