ಕರ್ನಾಟಕ ರಾಜ್ಯಕ್ಕೆ ನಮ್ಮ ಸರ್ಕಾರ ಅನ್ಯಾಯ ಮಾಡಲ್ಲ: ಗಡ್ಕರಿ

ಶನಿವಾರ, 3 ಸೆಪ್ಟಂಬರ್ 2016 (17:30 IST)
ಕರ್ನಾಟಕ ರಾಜ್ಯಕ್ಕೆ ನಮ್ಮ ಸರ್ಕಾರ ಯಾವುದೇ ರೀತಿಯ ಅನ್ಯಾಯ ಮಾಡಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ.
 
ಕೊಪ್ಪಳದಲ್ಲಿ ಹೆದ್ದಾರಿ ಕಾಮಗಾರಿಗೆ ಚಾಲನೆ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಈಗ ನಿರ್ಮಾಣವಾಗುತ್ತಿರುವ ರಸ್ತೆಗಳು 5 ವರ್ಷಗಳಾದರೂ ಹಾಳುಗುವುದಿಲ್ಲ, ಹೆದ್ದಾರಿ ನಿರ್ಮಾಣದಿಂದ ರಸ್ತೆ ಅಪಘಾತಗಳ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿವೆ ಎಂದರು.
 
ಪ್ರತಿ ವರ್ಷ ಐದು ಲಕ್ಷ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ.  ರಸ್ತೆ ಅಪಘಾತಗಳಿಗೆ ಗುಣಮಟ್ಟವಾದ ರಸ್ತೆಗಳಿಲ್ಲದಿರುವುದೇ ಮೂಲ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
 
4 ಸಾವಿರ ಕೋಟಿ ವೆಚ್ಚದಲ್ಲಿ 2 ಲಕ್ಷ ಕಿ.ಮಿ ಹೆದ್ದಾರಿ ನಿರ್ಮಾಣ ಮಾಡಲಾಗುತ್ತಿದೆ. ಕರ್ನಾಟಕ ರಾಜ್ಯಕ್ಕೆ ಮೋದಿ ಸರಕಾರದಿಂದ ಅನ್ಯಾಯವಾಗುವುದಿಲ್ಲ. ರಾಜ್ಯಗಳ ಅಭಿವೃದ್ಧಿಯಲ್ಲಿ ದೇಶದ ಅಭಿವೃದ್ಧಿ ಅಡಗಿದೆ ಎನ್ನುವುದು ಪ್ರಧಾನಿ ಮೋದಿಯವರ ಅನಿಸಿಕೆಯಾಗಿದೆ ಎಂದು ಕೇಂದ್ರ ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ