ತೃಣಮೂಲ ಕಾಂಗ್ರೆಸ್ ಪಕ್ಷ ಆಯೋಜಿಸಿದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ರಾಜ್ಯಗಳ ವಿಷಯಗಳಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದೆ. ಬಿಜೆಪಿಯನ್ನು ಪ್ರಬಲವಾಗಿ ಎದುರಿಸಲು ಪ್ರಾದೇಶಿಕ ಪಕ್ಷಗಳು ಸಶಕ್ತವಾಗಬೇಕು ಎಂದು ಕರೆ ನೀಡಿದರು.
ಮೋದಿ ಸರಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹದಗೆಡಿಸಿ, ರಾಜ್ಯಗಳಲ್ಲಿ ಅನಗತ್ಯವಾಗಿ ಮೂಗು ತೂರಿಸುತ್ತಿದೆ. 1993ರಲ್ಲಿ .ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆಯ ದಿನವನ್ನು ಹುತಾತ್ಮರ ದಿನವನ್ನಾಗಿ ಪ್ರತಿ ವರ್ಷವು ಆಚರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಾದೇಶಿಕ ಶಕ್ತಿಗಳನ್ನು ಬಲಪಡಿಸಲು ನಮ್ಮ ಆತ್ಮಿಯ ಗೆಳೆಯರಿಗೆ ನೆರವು ನೀಡಲು ಸಿದ್ದವಾಗಿದ್ದೇನೆ. ಆದರೆ, ನನಗೆ ಪ್ರಧಾನಿಯಾಗುವ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ,