ಕಾರ್ಪೋರೇಟ್ ಕಂಪೆನಿಗಳಿಗಾಗಿ ರೈತರ ಭೂಮಿ ಸ್ವಾಧೀನ ಬೇಡ: ಮೋದಿಗೆ ಬಿಜೆಪಿ ನಾಯಕಿ ಸಲಹೆ

ಬುಧವಾರ, 27 ಮೇ 2015 (17:52 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಕಾರ್ಪೋರೇಟ್ ಕಂಪೆನಿಗಳಿಗಾಗಿ ರೈತರ ಭೂಮಿಯನ್ನು ಕಸಿಯುವುದು ಸರಿಯಲ್ಲ. ಭೂಸ್ವಾಧೀನ ಮಸೂದೆ ಜಾರಿಗೊಳಿಸದಂತೆ ತಡೆದ ಕಾಂಗ್ರೆಸ್ ದೇಶದ ಅಭಿವೃದ್ಧಿಗೆ ಮಾರಕವಾಗಿ ಪರಿಣಮಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸರೋಜ್ ಪಾಂಡೆ ಹೇಳಿದ್ದಾರೆ. 
 
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ. ಕಳೆದ ಹಲವು ದಿನಗಳಿಂದ ಕಣ್ಮರೆಯಾಗಿದ್ದ ನಾಯಕ ಸೂಟ್-ಬೂಟಿನ ಸರಕಾರ ಎಂದು ಹೇಳುವ ಬದಲಾಗಿ ಯುಪಿಎ ಸರಕಾರದ ಅವಧಿಯಲ್ಲಿ ನಡೆದ ಸೂಟ್‌ಕೇಸ್ ಹಗರಣಗಳ ಬಗ್ಗೆ ಗಮನಹರಿಸಲಿ ಎಂದು ವ್ಯಂಗ್ಯವಾಡಿದ್ದಾರೆ.  
 
ಮೋದಿ ಸರಕಾರ ಒಂದು ವರ್ಷಧ ಅವಧಿಯಲ್ಲಿ ಭ್ರಷ್ಟಾಚಾರ ಮುಕ್ತವಾಗಿ ಕಾರ್ಯನಿರ್ವಹಿಸಿದ್ದಲ್ಲದೇ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದು ಪ್ರತಿಯೊಂದು ಕ್ಷೇತ್ರಕ್ಕೂ ಕಾಯಕಲ್ಪ ಒದಗಿಸಿದೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ನೇತೃತ್ವದ ಯುಪಿಎ ಅವಧಿಯಲ್ಲಿ ಸರಕಾರವನ್ನು ರಿಮೋಟ್ ಕಂಟ್ರೋಲ್‌ನಿಂದ ನಿಯಂತ್ರಿಸಲಾಗುತ್ತಿತ್ತು. ಆದರೆ, ಮೋದಿ ಸರಕಾರಕ್ಕೆ ಯಾವುದೇ ರಿಮೋಟ್ ಕಂಟ್ರೋಲ್ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸರೋಜ್ ಪಾಂಡೆ ಲೇವಡಿ ಮಾಡಿದ್ದಾರೆ.
 

ವೆಬ್ದುನಿಯಾವನ್ನು ಓದಿ