ಸಮಸ್ತ ಜನತೆಗೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಮೋದಿ

ಬುಧವಾರ, 22 ಮಾರ್ಚ್ 2023 (09:20 IST)
ನವದೆಹಲಿ : ಭಾರತದಲ್ಲಿ ಯುಗಾದಿ ಎಂದರೆ ಹೊಸ ಯುಗದ ಆರಂಭ ಎಂದರ್ಥ. ಇಂದು (ಮಾ.22) ಭಾರತದೆಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.
 
ಮನೆ-ಮನಗಳಲ್ಲಿ ಸಂಭ್ರಮವೋ ಸಂಭ್ರಮ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು ನಾಡಿನ ಜನತೆಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಎಲ್ಲರಿಗೂ ಸಂತಸದ ಯುಗಾದಿಯ ಶುಭಾಶಯಗಳು. ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬವು, ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಬರೆದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ