ಸಂಸತ್ ಕಲಾಪಕ್ಕೆ ಅಡ್ಡಿ: ರಾಜೀವ್ ಗಾಂಧಿ ಹೇಳಿಕೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಗುರುವಾರ, 3 ಮಾರ್ಚ್ 2016 (14:09 IST)
ಪ್ರಧಾನಿ ಮೋದಿ ಕಾರ್ಯವೈಖರಿ ಕುರಿತಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ ಮಾರನೇ ದಿನವೇ ಕಾಂಗ್ರೆಸ್ ಪಕ್ಷವನ್ನು ಪ್ರಧಾನಿ ಮೋದಿ ತರಾಟೆಗೆ ತೆಗೆದುಕೊಂಡಿದ್ದಾರೆ.  
 
ಸಂಸತ್ ಕಲಾಪ ಅಸ್ತವ್ಯಸ್ಥಗೊಳಿಸುವುದು ಪ್ರಜಾಪ್ರಭುತ್ವದಲ್ಲಿ ಮಾರಕ ಎಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೇಳಿರುವುದನ್ನು ಕಾಂಗ್ರೆಸ್ ಮುಖಂಡರಿಗೆ ಮೋದಿ ನೆನಪಿಸಿದರು.
 
ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಧನ್ಯವಾದಗಳನ್ನು ಅರ್ಪಿಸುವ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಿಪಕ್ಷಗಳ ಮುಖಂಡರು ಕೀಳರಿಮೆಯಿಂದಾಗಿ ಸಂಸತ್ ಕಲಾಪ ನಡೆಯಲು ಬಿಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.  
 
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೂಡಾ ಸಂಸತ್ ಅಧಿವೇಶನದ ಕಲಾಪ ಅಸ್ತವ್ಯಸ್ಥಗೊಳಿಸುವುದು ಸರಿಯಲ್ಲ ಎಂದು ಸಲಹೆ ನೀಡಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.
 
ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವಾಗಿದ್ದರಿಂದ ಸಂಸತ್ತಿನಲ್ಲಿ ಕೇವಲ ಮಹಿಳೆಯರು ಮಾತ್ರ ಮಾತನಾಡುವುದು ಸೂಕ್ತ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.  

ವೆಬ್ದುನಿಯಾವನ್ನು ಓದಿ