ಮೋದಿ ಮೇಕ್ ಇನ್ ಇಂಡಿಯಾ ಮಾಡುವ ಬದಲು ಮೇಕ್ ಇನ್ ಚೀನಾ ಮಾಡಲು ಹೊರಟಿದ್ದಾರೆ - ರಾಹುಲ್ ಗಾಂಧಿ

ಸೋಮವಾರ, 14 ಅಕ್ಟೋಬರ್ 2019 (08:55 IST)
ನವದೆಹಲಿ : ಪ್ರಧಾನಿ ಮೋದಿ ಮೇಕ್ ಇನ್ ಇಂಡಿಯಾ ಮಾಡುವ ಬದಲು ಮೇಕ್ ಇನ್ ಚೀನಾ ಮಾಡಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.




ಲಾತೂರ್ ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಚೀನಾದ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ 2017 ರಲ್ಲಿ ಚೀನಾದ ಸೈನ್ಯ ಭಾರತೀಯ ಭೂಪ್ರದೇಶದ ಮೇಲೆ ಆಕ್ರಮಣ ಮಾಡಿದರ ಬಗ್ಗೆ ಕೇಳಿಲ್ಲ. ಪ್ರಧಾನಿ ಮೋದಿ ಮೇಕ್ ಇನ್ ಇಂಡಿಯಾ ಮಾಡುವ ಬದಲು ಮೇಕ್ ಇನ್ ಚೀನಾ ಮಾಡಲು ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

 

ಅಲ್ಲದೇ ಯುವಕರು ಕೆಲಸದ ಬಗ್ಗೆ ಕೇಂದ್ರ ಸರ್ಕಾರವನ್ನು ಕೇಳಿದರೆ ಬಿಜೆಪಿ ಚಂದ್ರನ ಕಡೆ ತೋರಿಸುತ್ತಾರೆ. 370 ನೇ ವಿಧಿ ಮತ್ತು ಚಂದ್ರಯಾನದ ಬಗ್ಗೆ ಸದಾ ಮಾತನಾಡುವ ಕೇಂದ್ರ ಸರ್ಕಾರ ದೇಶದ ಸಮಸ್ಯೆ ಬಗ್ಗೆ ಮೌನ ವಹಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ