ನೋಟು ನಿಷೇಧ ಕುರಿತಂತೆ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್, ಕೇಂದ್ರ ಸರಕಾರವನ್ನು ಹೊಗಳಿದ ಕೆಲ ವಾರಗಳ ನಂತರ, ಇದೀಗ ಪ್ರಧಾನಿ ಮೋದಿ, ರಾಜ್ಯದಲ್ಲಿ ಮದ್ಯ ನಿಷೇಧಿಸಿರುವುದಕ್ಕಾಗಿ ನಿತೀಶ್ ಕುಮಾರ್‌ರನ್ನು ಹೊಗಳಿದ್ದಾರೆ.
10ನೇ ಸಿಖ್ ಗುರು ಗೋವಿಂದ್ ಸಿಂಗ್ ಅವರ 350ನೇ ಪ್ರಕಾಶ್ ಪರ್ವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ, ಬಿಹಾರ್ ಸಿಎಂ ನಿತೀಶ್ ಕುಮಾರ್, ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಅವರೊಂದಿಗೆ ವೇದಿಕೆ ಹಂಚಿಕೊಂಡರು.