ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದಲ್ಲಿ ಕ್ರಿಮಿನಲ್ಗಳ ವಿರುದ್ಧ ಕೈಗೊಂಡ ಬುಲ್ಡೋಜರ್ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಈಗ ವಿರಮಿಸುವ ಸಮಯವಲ್ಲ. 2024ಕ್ಕೆ (ಲೋಕಸಭೆ ಚುನಾವಣೆಗೆ) ಸಿದ್ಧತೆ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ. ನೇಪಾಳ ಪ್ರವಾಸದಿಂದ ಮರಳಿದ ಕೂಡಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಸಚಿವ ಸಂಪುಟದ ಜತೆ ದಿಲ್ಲಿಯಲ್ಲಿ ಸಭೆ ನಡೆಸಿದ ಮೋದಿ,
ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಸುಧಾರಿಸಿದೆ ಎಂದು ಅಭಿನಂದಿಸಿದರು. ಇತ್ತೀಚೆಗೆ ಯೋಗಿ ಸರ್ಕಾರ ಕ್ರಿಮಿನಲ್ಗಳ ಆಸ್ತಿಪಾಸ್ತಿ ನಾಶಕ್ಕೆ ಬುಲ್ಡೋಜರ್ಗಳನ್ನು ಬಳಸಿತ್ತು ಹಾಗೂ ಇತರ ಕೆಲ ಬಿಜೆಪಿ ರಾಜ್ಯಗಳು ಅದನ್ನು ಅನುಸರಿಸಿದ್ದವು ಎಂಬುದು ಗಮನಾರ್ಹ.
ಈ ನಡುವೆ, ಕ್ಷೇತ್ರದಲ್ಲೇ ಹೆಚ್ಚು ಕಾಲ ಕಳೆದು ಜನರೊಂದಿಗೆ ಹೆಚ್ಚು ಬೆರೆಯಬೇಕು. ಸರ್ಕಾರದ ಯೋಜನೆಗಳು ಬಡವರನ್ನು ತಲುಪುವಂತೆ ನೋಡಿಕೊಳ್ಳಬೇಕು. ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯ ಇರಬೇಕು ಎಂದು ಸೂಚಿಸಿದರು ಎಂದು ಮೋದಿ ತಿಳಿದುಬಂದಿದೆ.