ದೇಶಗಳ ನಾಯಕರ ಜೊತೆ ಮೋದಿ ದ್ವಿಪಕ್ಷೀಯ ಸಭೆ

ಶುಕ್ರವಾರ, 8 ಸೆಪ್ಟಂಬರ್ 2023 (12:34 IST)
ನವದೆಹಲಿ : ಸೆಪ್ಟೆಂಬರ್ 9 ರಿಂದ 10ರವರೆಗೆ ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯ ಹೊರತಾಗಿ, ಪ್ರಧಾನಿ ನರೇಂದ್ರ ಮೋದಿ ಅವರು 15ಕ್ಕೂ ಹೆಚ್ಚು ದೇಶಗಳ ನಾಯಕರ ಜೊತೆಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಇಂದು ಪ್ರಧಾನಿ ಮೋದಿ ಅವರು ಮಾರಿಷಸ್, ಬಾಂಗ್ಲಾದೇಶ ಮತ್ತು ಯುಎಸ್ಎ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಬಳಿಕ ಯುಕೆ, ಜಪಾನ್, ಜರ್ಮನಿ ಮತ್ತು ಇಟಲಿ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.

ಸೆಪ್ಟೆಂಬರ್ 10 ರಂದು ಪ್ರಧಾನಿ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ಮಧ್ಯಾಹ್ನದ ಭೋಜನದೊಂದಿಗೆ ಸಭೆ ನಡೆಸಲಿದ್ದಾರೆ.

ಕೊಮೊರೊಸ್, ಟರ್ಕಿ, ಯುಎಇ, ದಕ್ಷಿಣ ಕೊರಿಯಾ, ಇಯು/ಇಸಿ, ಬ್ರೆಜಿಲ್ ಮತ್ತು ನೈಜೀರಿಯಾ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುವುದರ ಜೊತೆಗೆ ಕೆನಡಾ ಅಧ್ಯಕ್ಷ ಜಸ್ಟಿನ್ ಟ್ರುಡೊ ಅವರೊಂದಿಗೆ ಪ್ರಧಾನಿ ಮೋದಿ ಫುಲ್-ಸೈಡ್ ಸಭೆಯನ್ನು ನಡೆಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ