ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮ್ಯಾಚ್ ಫಿಕ್ಸಿಂಗ್ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ, ಚುನಾವಣಾ ಆಯೋಗಕ್ಕೆ ಸೋಮವಾರ ದೂರು ನೀಡಿದೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನವನ್ನು ಖಂಡಿಸಿ 'ಇಂಡಿಯಾ', ಇಲ್ಲಿನ ರಾಮಲೀಲಾ ಮೈದಾನದಲ್ಲಿ ಭಾನುವಾರ ಬೃಹತ್ ರ್‍ಯಾಲಿ ನಡೆಸಿತು. ಭಾಷಣದಲ್ಲಿ ರಾಹುಲ್ ಗಾಂಧಿ ಅವರು ಮೋದಿ ಹಾಗೂ ಕೇಂದ್ರದ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.
ಇನ್ನೂ ಈ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬಂದರೆ ಸಂವಿಧಾನವೇ ಬದಲಾಗಲಿದೆ. ಇದರಿಂದ ದೇಶ ಹೊತ್ತಿ ಉರಿಯಲಿದೆ ಎಂದರು.
ಇನ್ನೂ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಹಾಗೂ ಕೇಜ್ರಿವಾಲ್ ಬಂಧನವನ್ನು ಖಂಡಿಸಿದ ರಾಹುಲ್, ವಿರೋಧ ಪಕ್ಷಗಳ ಇಬ್ಬರನ್ನು ಈಗಾಗಲೇ ಬಂಧಿಸಲಾಗಿದೆ. ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳಲು ಪ್ರಧಾನಿ ಯತ್ನಿಸಿದ್ದಾರೆ ಎಂದು ಆರೋಪಿಸದ್ದರು.
ರಾಹುಲ್ ಹೇಳಿಕೆ ವಿರುದ್ಧ ಇದೀಗ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.