ಇಂದು ಮೋದಿ ತಾಯಿ ಹೀರಾಬೆನ್ ಅಂತ್ಯಕ್ರಿಯೆ

ಶುಕ್ರವಾರ, 30 ಡಿಸೆಂಬರ್ 2022 (10:24 IST)
ನವದೆಹಲಿ : ಇಂದೇ ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ಸದ್ಯ ಗಾಂಧಿನಗರದ ಪಂಕಜ್ ಮೋದಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇತ್ತ ಪ್ರಧಾನಿಯವರು ಕೂಡ ಅಹಮದಾಬಾದ್ಗೆ ಭೇಟಿ ನೀಡಿದ್ದು, ಯೂಎನ್ ಮೆಹ್ತಾ ಆಸ್ಪತ್ರೆಗೆ ತೆರಳಿ ತಾಯಿಯ ಅಂತಿಮ ದರ್ಶನ ಪಡೆದಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹೀರಾಬೆನ್ ಅವರನ್ನು ಬುಧವಾರವಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3.39ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ