ಪಾಕ್ ಪ್ರಧಾನಿ ನವಾಜ್ ಷರೀಫ್ ಭೇಟಿಯಾದ ಪ್ರಧಾನಿ ಮೋದಿ

ಶುಕ್ರವಾರ, 9 ಜೂನ್ 2017 (13:04 IST)
ಭಾರತ ಮತ್ತು ಪಾಕಿಸ್ತಾನದ ಗಡಿಯ ಮಧ್ಯೆ ಉದ್ರಿಕ್ತತೆಯ ವಾತಾವರಣದ ಮಧ್ಯೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್‌ರನ್ನು ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಾಂಘೈ ಕೋಆಪರೇಶನ್ ಆರ್ಗಲೈಜೇಶನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಪ್ರಧಾನಿ ಮೋದಿ ಮತ್ತು ನವಾಜ್ ಷರೀಫ್ ಪರಸ್ಪರ ಹಸ್ತಲಾಘವ ಮಾಡಿ ಶುಭಕೋರಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿ ಮೂಲಗಳು ತಿಳಿಸಿವೆ. 
 
ಪ್ರಧಾನಿ ಮೋದಿ, ನವಾಜ್ ಷರೀಫ್ ಅವರ ತಾಯಿ ಮತ್ತು ಕುಟುಂಬದ ಬಗ್ಗೆ ವಿಚಾರಿಸಿದರು ಎನ್ನಲಾಗಿದೆ. ಉಭಯ ಪ್ರಧಾನಿ ಮಧ್ಯೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಇಲಾಖೆಯ ವಕ್ತಾರ ಗೋಪಾಲ್ ಬಾಗ್ಲೆ ನಾವು ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ. ಅವರೂ ಕೂಡಾ ಯಾವುದೇ ಪ್ರಸ್ತಾವನೆ ಇಟ್ಟಿಲ್ಲ ಎಂದು ತಿಳಿಸಿದ್ದಾರೆ. 
 
ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಭಾರತೀಯ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸುತ್ತಿರುವುದು ದೇಶದ ಜನತೆಯಲ್ಲಿ ಆಕ್ರೋಶ ಮೂಡಿಸಿದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ