ಅನಧಿಕೃತ ಮಾಹಿತಿ ಆಧರಿಸಿ ಹೇಳಿಕೆ ನೀಡಿದ್ದಕ್ಕೆ ಮೋದಿ ಕ್ಷಮೆಯಾಚಿಸಬೇಕು - ಕಾಂಗ್ರೆಸ್ ಒತ್ತಾಯ

ಭಾನುವಾರ, 10 ಜೂನ್ 2018 (13:43 IST)
ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮತ್ತು ಕಾಂಗ್ರೆಸ್‌ನ ನಾಯಕರ ಮೇಲೆ ಸುಳ್ಳು ಆರೋಪ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ  ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.


ಮಾಹಿತಿ ಹಕ್ಕು ಕಾಯ್ದೆ ಅಡಿ ಕೇಳಿದ್ದ ಮಾಹಿತಿಗೆ ಪ್ರಧಾನಿ ಕಚೇರಿ, ಗುಜರಾತ್‌ ಚುನಾವಣೆ ಫಲಿತಾಂಶದ ಮೇಲೆ ಪ್ರಭಾವ ಬೀರಲು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮತ್ತು ಕಾಂಗ್ರೆಸ್‌ನ ನಾಯಕರು ಪಾಕಿಸ್ತಾನದ ಜತೆ ಕೈಜೋಡಿಸಿದ್ದಾರೆಂದು ಉತ್ತರ ನೀಡಿದೆ. ಈ ಬಗ್ಗೆ ಮಾತನಾಡಿದ ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ ಅವರು,’ ಮೋದಿಯವರು ಪ್ರಧಾನಿಯಾದಾಗಿನಿಂದಲೂ ಅನಧಿಕೃತ ಮಾತುಗಳನ್ನೇ ಆಡುತ್ತಿದ್ದಾರೆ. ಆದರೆ, ಈಗ ಅವರನ್ನು ಅತ್ಯಂತ ಪ್ರಭಾವಿ ಪ್ರಧಾನಿಯೆಂದು ಪರಿಗಣಿಸಲಾಗುತ್ತಿದೆ, ಅವರೊಬ್ಬ ಚುನಾಯಿತ ನಾಯಕ ಮತ್ತು ಸಂವಿಧಾನಿಕ ಹುದ್ದೆಯಲ್ಲಿರುವವರು. ಸಂವಿಧಾನದ ಅಡಿ ಪ್ರಮಾಣ ಸ್ವೀಕರಿಸಿದ ಮೇಲೆ ಹೇಗೆ ಅನಧಿಕೃತ ಮಾಹಿತಿ ಆಧರಿಸಿ ಇಂತಹ ಹೇಳಿಕೆ ನೀಡಬಹುದಾ’ ಎಂದು ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ