ದೇವರನಾಡಿಗೆ ಇಂದು ಪ್ರಧಾನಿ

ಶನಿವಾರ, 24 ಸೆಪ್ಟಂಬರ್ 2016 (10:06 IST)
ಬಿಜೆಪಿಯ ಮೂರು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಶುಕ್ರವಾರದಿಂದ ಕೋಳಿಕ್ಕೋಡ್‌ನಲ್ಲಿ ಪ್ರಾರಂಭವಾಗಿದ್ದು  ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ದೇವರನಾಡು ಕೇರಳಕ್ಕೆ ಆಗಮಿಸುತ್ತಿದ್ದಾರೆ. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಉರಿ ದಾಳಿಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಮೌನ ಮುರಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಕಲ್ಲಿಕೋಟೆ ಸಮುದ್ರ ತೀರದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪ್ರಧಾನಿ ಪಾಕಿಸ್ತಾನಕ್ಕೆ ಮತ್ತು ಕಾಶ್ಮೀರ ಪ್ರತ್ಯೇಕತಾವಾದಿಗಳಿಗೆ ಕಠಿಣ ಸಂದೇಶ ರವಾನಿಸಲಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.
 
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿ ಸಭೆಯಲ್ಲಿ ಉರಿ ದಾಳಿಗೆ ಪ್ರತೀಕಾರವಾಗಿ ಪಾಕ್ ವಿರುದ್ಧ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.
 
ಜತೆಗೆ ಜಿಎಸ್‌ಟಿ ಅನುಷ್ಠಾನ, ದೀನ್ ದಯಾಳ್ ಉಪಾಧ್ಯಾಯ್ ಅಂತ್ಯೋದಯ ಯೋಜನೆ, ಮೋದಿ ಸರ್ಕಾರ ನೂತನವಾಗಿ ಜಾರಿಗೆ ತರಲಿರುವ ಗರೀಬ್ ಕಲ್ಯಾಣ್ ಯೋಜನೆ ಬಗ್ಗೆ ಕೂಡ ಚರ್ಚೆ ನಡೆಯಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ