ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ 2024ರ ಮುಕ್ತಾಯದ ನಂತರ ಭಾರತೀಯ ಒಲಿಂಪಿಕ್ ತಂಡವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಯಾಗಿ ಅಭಿನಂದಿಸಿದರು.
ಪದಕ ವಿಜೇತರಿಗೆ ಅಭಿನಂದನೆ ಸಲ್ಲಿಸಿದ ಅವರು ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡರು. ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಬೆಳ್ಳಿ ಪದಕ ವಿಜೇತ ಜಾವೆಲಿನ್ ಥ್ರೋ ಅಥ್ಲೀಟ್ ನೀರಜ್ ಕುಮಾರ್ ಮತ್ತು ಮಾಜಿ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಅವರು ಹಾಜರಾಗಿಲ್ಲ.
ಸಭೆಯಲ್ಲಿ, ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಯುವ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವ ರಕ್ಷಾ ನಿಖಿಲ್ ಖಡ್ಸೆ ಸಹ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ದೇಶದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಭಾರತದ ಒಲಿಂಪಿಕ್ ಪದಕ ವಿಜೇತರನ್ನು ವಿಶೇಷ ಅತಿಥಿಗಳಾಗಿ ಕೆಂಪು ಕೋಟೆಗೆ ಆಹ್ವಾನಿಸಲಾಯಿತು.