ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಗೆ ತೆಲಂಗಾಣ ಕಾಂಗ್ರೆಸ್ ನ ನಾಯಕತ್ವ
ಈಗಾಗಲೇ ಎರಡು ಬಾರಿ ಕಾಂಗ್ರೆಸ್ ನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅಜರುದ್ದೀನ್ ಒಮ್ಮೆ ಗೆದ್ದು, ಒಮ್ಮೆ ಸೋತಿದ್ದಾರೆ. ಹೈದರಾಬಾದ್ ಮೂಲದವರಾದ ಅಜರುದ್ದೀನ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ. ಅದಕ್ಕೂ ಮೊದಲು ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆಸುವ ಜವಾಬ್ಧಾರಿ ಟೀಂ ಇಂಡಿಯಾದ ಮಾಜಿ ನಾಯಕನ ಹೆಗಲಿಗೇರಿದೆ.