ಕ್ರಿಕೆಟಿಗ ಮೊಹಮ್ಮದ್ ಶಮಿ ಪತ್ನಿ ಹಸೀನ್ ಜಹಾನ್ ಕಾಂಗ್ರೆಸ್ ಗೆ ಸೇರ್ಪಡೆ

ಬುಧವಾರ, 17 ಅಕ್ಟೋಬರ್ 2018 (08:58 IST)
ನವದೆಹಲಿ: ಪತಿ ಮೊಹಮ್ಮದ್ ಶಮಿ ಮೇಲೆ ಗೃಹ ಹಿಂಸೆ ಆರೋಪ ಹೊರಿಸಿದ್ದ ಕ್ರಿಕೆಟಿಗ ಮೊಹಮ್ಮದ್ ಶಮಿ ಪತ್ನಿ ಹಸೀನ್ ಜಹಾನ್ ಇದೀಗ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಮಾಡೆಲ್ ಕೂಡಾ ಆಗಿರುವ ಹಸೀನ್ ಜಹಾನ್ ಮುಂಬೈಯ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಕ್ರಿಕೆಟಿಗ ಪತಿ ವಿರುದ್ಧ ಗೃಹಹಿಂಸೆ, ಲೈಂಗಿಕ ಶೋಷಣೆ ಆರೋಪ ಹೊರಿಸಿದ್ದ ಹಸೀನ್ ಜಹಾನ್ ಒಮ್ಮೆ ಭಾರೀ ಸುದ್ದಿಯಲ್ಲಿದ್ದರು. ಇದೀಗ ಈ ಪ್ರಕರಣ ತನಿಖೆ ನಡೆಯುತ್ತಿದೆ. ಅದರ ಬೆನ್ನಲ್ಲೇ ಹಸೀನ್ ರಾಜಕೀಯಕ್ಕೆ ಧುಮುಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ