ಅಕ್ರಮ ಹಣ ವರ್ಗಾವಣೆ ಆರೋಪ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುತ್ರಿ ವಿರುದ್ಧ ದೂರು

Sampriya

ಬುಧವಾರ, 27 ಮಾರ್ಚ್ 2024 (17:03 IST)
Photo Courtesy X
ಕೊಚ್ಚಿ:  ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ  ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುತ್ರಿ ವೀಣಾ ವಿಜಯನ್, ಅವರಿಗೆ ಸೇರಿದ ಐಟಿ ಕಂಪನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯವು  ದೂರು ದಾಖಲಿಸಿದೆ ಎಂದು ತಿಳಿದುಬಂದಿದೆ.

ಖಾಸಗಿ ಖನಿಜ ಸಂಸ್ಥೆಯಿಂದ ಅಕ್ರಮವಾಗಿ ಹಣ ಪಡೆದ ಆರೋಪದಲ್ಲಿ ತನಿಖಾ ಸಂಸ್ಥೆಯು ಪ್ರಕರಣ ದಾಖಲಿಸಿಕೊಂಡಿದೆ. ಇದರಲ್ಲಿ ಭಾಗಿಯಾಗಿರುವವರಿಗೆ ಸಮನ್ಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಗಂಭೀರ ವಂಚನೆ ಪ್ರಕರಣಗಳ ತನಿಖಾ ವಿಭಾಗ (ಎಸ್‌ಎಫ್‌ಐಒ) ಸಲ್ಲಿಸಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದೆ.

2018 19ರ ಅವಧಿಯಲ್ಲಿ ಕೊಚ್ಚಿನ್ ಮಿನರಲ್ಸ್‌ ಹಾಗೂ ರುಟೈಲ್ ಲಿಮಿಟೆಡ್‌ ಎನ್ನುವ ಕಂಪನಿಗಳು ವೀಣಾ ಅವರ ಎಕ್ಸಲಾಜಿಕ್ ಸೆಲ್ಯೂಷನ್‌ನಿಂದ ಯಾವುದೇ ಸೇವೆ ಪಡೆಯದಿದ್ದರೂ ₹1.72 ಕೋಟಿ ಹಣವನ್ನು ಅಕ್ರಮವಾಗಿ ಪಾವತಿ ಮಾಡಿದೆ ಎಂದು ಆರೋಪಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ