ಖ್ಯಾತ ಸುಗಂಧದ್ರವ್ಯ ತಜ್ಞೆ ಮೋನಿಕಾ ಘುರ್ಡೆ ಅಕ್ಟೋಬರ್ 6 ರಂದು ಗೋವಾದ ಸಂಗೊಲ್ಡಾದಲ್ಲಿರುವ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ದೇಶಾದ್ಯಂತ ಸಂಚಲನ ಮೂಡಿಸಿದ್ದ ಈ ಪ್ರಕರಣದ ಆರೋಪಿಯನ್ನು ಘಟನೆ ನಡೆದ ಮೂರು ದಿನಗಳ ಬಳಿಕ ಗೋವಾ, ಮಂಗಳೂರು, ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ಬಂಧಿಸಲಾಗಿತ್ತು. ಮೋನಿಕಾ ಘುರ್ಡೆ ಹತ್ಯೆ ಬಳಿಕ ಆರೋಪಿ ಅವರ 2 ಎಟಿಎಂ ಕಾರ್ಡ್ ಮತ್ತು ಮೊಬೈಲ್ ಕದ್ದಿದ್ದ ಮತ್ತು ಘಟನೆ ನಡೆದ ಒಂದು ಗಂಟೆಯೊಳಗೆ ಅದೇ ಎಟಿಎಂ ಬಳಸಿ ಆರೋಪಿ ಹಣ ತೆಗೆಯುತ್ತಿರುವ ಸಿಸಿಟಿವಿ ದೃಶ್ಯಗಳು ಪೊಲೀಸರಿಗೆ ಲಭ್ಯವಾಗಿದ್ದವು. ಇದನ್ನು ಆಧರಿಸಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿತ್ತು.