ತೆಲಂಗಾಣಕ್ಕೆ ಬಂದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ !

ಸೋಮವಾರ, 25 ಜುಲೈ 2022 (12:48 IST)
ಹೈದರಬಾದ್ : ವಿದೇಶದಿಂದ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಗೆ ಮರಳಿದ 40 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಕಾಯಿಲೆಯ ರೋಗ ಲಕ್ಷಣಗಳು ಕಾಣಿಸಿಕೊಂಡಿದೆ.

ಮಂಕಿಪಾಕ್ಸ್ ಕಾಯಿಲೆಯ ರೋಗ ಲಕ್ಷಣವನ್ನು ಹೊಂದಿರುವ ವ್ಯಕ್ತಿ ಕಾಮರೆಡ್ಡಿ ಜಿಲ್ಲೆಯ ಇಂದಿರಾನಗರ ಕಾಲೋನಿಯ ನಿವಾಸಿಯಾಗಿದ್ದು, ಜುಲೈ 6 ರಂದು ಕುವೈತ್ನಿಂದ ಆಗಮಿಸಿದ್ದರು.

ಜುಲೈ 20 ರಂದು ಜ್ವರ ಕಾಣಿಸಿಕೊಂಡಿದ್ದು, ಜುಲೈ 23 ರಂದು ದದ್ದು ಕಾಣಿಸಿಕೊಂಡ ಹಿನ್ನೆಲೆ ವ್ಯಕ್ತಿಯನ್ನು ಕಾಮರೆಡ್ಡಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯ ಸಾರ್ವಜನಿಕ ಆರೋಗ್ಯ ನಿರ್ದೇಶಕ ಜಿ.ಶ್ರೀನಿವಾಸ ರಾವ್ ಅವರು ತಿಳಿಸಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಮಂಕಿಪಾಕ್ಸ್ ಕಾಯಿಲೆ ರೋಗ ಲಕ್ಷಣ ಹೊಂದಿರುವ ವ್ಯಕ್ತಿಯನ್ನು ಕಾಮರೆಡ್ಡಿ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವ್ಯಕ್ತಿಯ ಮಾದರಿಗಳನ್ನು ಸಂಗ್ರಹಿಸಿ ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಲ್ಯಾಬ್ಗೆ ಕಳುಹಿಸಲಾಗಿದ್ದು, ಫಲಿತಾಂಶ ಬರುವವರೆಗೂ ವ್ಯಕ್ತಿಯನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಲ್ಲದೇ ಈ ವ್ಯಕ್ತಿಯೊಂದಿಗೆ ನೇರವಾಗಿ ಸಂಪರ್ಕ ಹೊಂದಿದ್ದ 6 ಜನರನ್ನು ಪರೀಕ್ಷೆಗೆ ಒಳಪಡಿಸಿದಾಗ ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ. ಹೀಗಿದ್ದರೂ ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ ಎಂದಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ