ಮಂಕಿಪಾಕ್ಸ್ ರೋಗಿ ಸಂಪೂರ್ಣ ಗುಣಮುಖ

ಭಾನುವಾರ, 31 ಜುಲೈ 2022 (10:07 IST)
ತಿರುವನಂತಪುರಂ : ಭಾರತದ ಮೊದಲ ಮಂಕಿಪಾಕ್ಸ್ ಸೋಂಕು ಕೇರಳದ ವ್ಯಕ್ತಿಯೊಬ್ಬರಲ್ಲಿ ಕಂಡುಬಂದಿದ್ದು, ಅವರು ಇದೀಗ ವೈರಸ್ನಿಂದ ಸಂಪೂರ್ಣ ಚೇತರಿಸಿಕೊಂಡಿದ್ದಾರೆ.
 
ಕೊಲ್ಲಂ ಮೂಲದ ವ್ಯಕ್ತಿ ಸರ್ಕಾರಿ ವೈದ್ಯಕೀಯ ಕಾಲೇಜಿನಿಂದ ಇಂದು ಬಿಡುಗಡೆಯಾಗಿದ್ದಾರೆ.ಜುಲೈ 12ರಂದು ದುಬೈನಿಂದ ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಮರಳಿದ್ದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ರೋಗದ ಲಕ್ಷಣ ಕಂಡು ಬಂದು, ಜುಲೈ 14ರಂದು ಆಸ್ಪತ್ರೆಗೆ ದಾಖಲಾಗಿದ್ದರು. 

ಇದೀಗ ಭಾರತದ ಮೊದಲ ಮಂಕಿಪಾಕ್ಸ್ ರೋಗಿ ಸಂಪೂರ್ಣವಾಗಿ ಗುಣಮುಖರಾಗಿದ್ದು, ಅವರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ. ಚರ್ಮದಲ್ಲಿ ಕಂಡುಬಂದಿದ್ದ ಗುಳ್ಳೆಗಳು ಸಂಪೂರ್ಣವಾಗಿ ಗುಣವಾಗಿದೆ. ಅವರನ್ನು ಇಂದು ಡಿಸ್ಚಾರ್ಜ್ ಮಾಡಲಾಗುವುದು ಎಂದು ಕೇರಳ ಆರೋಗ್ಯ ಸಚಿವರಾದ ವೀಣಾ ಜಾರ್ಜ್ ತಿಳಿಸಿದ್ದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ