ಮಂಕಿಪಾಕ್ಸ್ ಭೀತಿ : ಸೋಂಕಿನ ಮೇಲೆ ನಿಗಾ ವಹಿಸಲು ಕೇಂದ್ರ ಸೂಚನೆ
ಮಂಗಳವಾರ, 24 ಮೇ 2022 (11:02 IST)
ಈಗಾಗಲೇ 12 ದೇಶಗಳಲ್ಲಿ ಮಂಕಿಪಾಕ್ಸ್ನ ಸುಮಾರು 92 ಪ್ರಕರಣಗಳನ್ನು ಖಚಿತವಾಗಿದೆ.
ಹೀಗಾಗಿ ಭಾರತದಲ್ಲೂ ಈ ಬಗ್ಗೆ ನಿಗಾ ಇರಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ. ರಾಷ್ಟ್ರೀಯ ರೋಗ ನಿಯಂತ್ರಣ ಸಂಸ್ಥೆ (ಎನ್ಸಿಡಿಸಿ) ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಈ ಬಗ್ಗೆ ಸೂಚನೆ ನೀಡಿರುವ ಸಚಿವಾಲಯ,
ಮಂಕಿಪಾಕ್ಸ್ ಹರಡುವಿಕೆಯ ಬಗ್ಗೆ ತೀವ್ರ ನಿಗಾ ವಹಿಸುವಂತೆ ಸೂಚಿಸಬೇಕು. ಸೋಂಕು ಹೆಚ್ಚಳವಾದರೆ ಸೋಂಕು ಪೀಡಿತ ದೇಶಗಳಿಂದ ಬಂದ ಜನರನ್ನು ದೇಶ ಪ್ರವೇಶಕ್ಕೂ ಮುನ್ನ ಪರೀಕ್ಷೆಗೆ ಒಳಪಡಿಸಬೇಕೆಂದು ಸೂಚಿಸಿದೆ.
ಡಬ್ಲ್ಯುಎಚ್ಒ ಪ್ರಕಾರ ಮಂಕಿಪಾಕ್ಸ್ ಸೋಂಕು ಸ್ಥಳೀಯವಾಗಿದ್ದು, ಕೆಲವು ದೇಶಗಳಲ್ಲಿ ರೋಗಗ್ರಸ್ಥ ಪ್ರಾಣಿಗಳಿಂದಾಗಿ ಜನರಿಗೆ ತಗುಲಿ ಮೈಮೇಲೆ ಬೊಬ್ಬೆ ಏಳುತ್ತವೆ. ಈ ದೇಶಗಳಿಂದ ಮರಳುತ್ತಿರುವ ಜನರಲ್ಲೂ ಸೋಂಕಿನ ಲಕ್ಷಣಗಳು ಕಂಡುಬರುತ್ತಿದೆ.
ಹೀಗಾಗಿ ರೋಗದ ಹರಡುವಿಕೆಯನ್ನು ತಪ್ಪಿಸಲು ವಿದೇಶಗಳಲ್ಲಿನ ಮಂಕಿಪಾಕ್ಸ್ ಸೋಂಕಿನ ಸ್ಥಿತಿಯ ಬಗ್ಗೆ ಸತತ ನಿಗಾ ಇರಿಸಬೇಕು.