ನಾಳೆ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭ

ಬುಧವಾರ, 19 ಜುಲೈ 2023 (10:58 IST)
ದೆಹಲಿ : ಜುಲೈ 20ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಇದಕ್ಕೂ ಮುನ್ನ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸರ್ಕಾರವು ಇಂದು (ಜು.19) ಸರ್ವಪಕ್ಷ ಸಭೆಯನ್ನು ಕರೆದಿದೆ.
 
ಈ ಸಭೆಯಲ್ಲಿ ಸರ್ಕಾರದ ಹಿರಿಯ ಮಂತ್ರಿಗಳು ಹಾಗೂ ವಿವಿಧ ಪಕ್ಷಗಳು ಸದಸ್ಯರು ತಮ್ಮ ಸಮಸ್ಯೆಗಳನ್ನು ತಿಳಿಸುವುದು ಹಿಂದಿನಿಂದಲ್ಲೂ ನಡೆದುಕೊಂಡು ಬಂದಿರುವ ವಾಡಿಕೆ. ಜತೆಗೆ ಅಧಿವೇಶನವನ್ನು ಸುಗಮವಾಗಿ ನಡೆಸಲು ಸಹಕಾರಿಸುವಂತೆ ಸಭೆಯಲ್ಲಿ ತಿಳಿಸಲಾಗುತ್ತದೆ. ಇನ್ನೂ ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಿದ್ದಾರೆ.

ಇನ್ನೂ ಈ ಸರ್ವಪಕ್ಷ ಸಭೆಯನ್ನು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಮಂಗಳವಾರ ಕರೆದಿದ್ದರು, ಆದರೆ ಅನೇಕ ಪಕ್ಷಗಳ ನಾಯಕರು ಗೈರುಹಾಜರಾದ ಕಾರಣ ಸಭೆಯನ್ನು ಮುಂದೂಡಲಾಗಿದೆ. ಜತೆಗೆ ವಿರೋಧ ಪಕ್ಷದ ನಾಯಕರು ಹಾಗೂ ಬೇರೆ ಬೇರೆ ಪಕ್ಷಗಳ ನಾಯಕರು ಬೆಂಗಳೂರಿನಲ್ಲಿ ನೆನ್ನೆ (ಮಂಗಳವಾರ) ಒಗ್ಗಟಿನ ಸಭೆ ನಡೆಸಿದ್ದಾರೆ. ಇನ್ನೊಂದು ಕಡೆ ಎನ್ಡಿಎ ಮಿತ್ರಕೂಟಗಳು ಕೂಡ ಸಭೆಯನ್ನು ನಡೆಸಿದೆ. ಒಟ್ಟಿನಲ್ಲಿ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಎರಡು ಪಕ್ಷಗಳ ಬಲ-ಬಲಗಳ ಶಕ್ತಿ ಪ್ರದರ್ಶನ ಮಾಡುತ್ತಿದೆ.

ಸರ್ವಪಕ್ಷ ಸಭೆಗೂ ಮುನ್ನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಲ್ಹಾದ್ ಜೋಶಿ ಮತ್ತು ಪಿಯೂಷ್ ಗೋಯಲ್ ಸೇರಿದಂತೆ ತಮ್ಮ ಸಂಪುಟದ ಕೆಲವು ಸಹೋದ್ಯೋಗಿಗಳೊಂದಿಗೆ ಸಭೆ ನಡೆಸಿದ್ದಾರೆ. ಸರ್ಕಾರ ಕರೆದಿರುವ ಸರ್ವಪಕ್ಷ ಸಭೆಗೆ ಸಂಬಂಧಿಸಿದಂತೆ ಅನೇಕ ವಿಚಾರಗಳನ್ನು ಈ ಸಭೆಯಲ್ಲಿ ಚರ್ಚಿಸಲಿದ್ದಾರೆ. ಇದರ ಜತೆಗೆ ಸಂಸತ್ ಸದಸ್ಯರು ತಮ್ಮ ಲೋಕಸಭಾ ಕ್ಷೇತ್ರಗಳ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳವ ದೃಷ್ಟಿಯಿಂದಲ್ಲೂ ಈ ಸಭೆಯನ್ನು ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ