ಮಗನ ಅನ್ಯ ಜಾತಿಯ ಹುಡುಗಿಯ ಮೇಲೆ ಲವ್: ತಾಯಿಗೆ ಶಿಕ್ಷೆ!
ಮಗ ಹುಡುಗಿಯೊಂದಿಗೆ ಓಡಿ ಹೋಗಿದ್ದಕ್ಕೆ ಗುಂಪೊಂದು ತಾಯಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನಸೋ ಇಚ್ಛೆ ಥಳಿಸಿದೆ. ಇದೀಗ ಗಾಯಗೊಂಡಿರುವ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಗ ಪ್ರೀತಿಸಿದ ಹುಡುಗಿಯನ್ನು ಮದುವೆಯೂ ಆಗಿದ್ದ. ಇದರಿಂದ ಆಕ್ರೋಶಗೊಂಡ ಹುಡುಗಿಯ ಸಂಬಂಧಿಕರು ಮನೆಗೆ ನುಗ್ಗಿ ಹುಡುಗನ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿದ್ದಾರೆ.