ಶಿವಪಾಲ್ ಸಿಂಗ್ ಯಾದವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.ವರಿಗೆ ನೀಡಿದ ದೂರಿನಲ್ಲಿ ಕಳೆದ ಒಂದು ವಾರದಿಂದ ಬಿಸಿಲಿನ ತಾಪದಿಂದಾಗಿ ಮನುಷ್ಯರು, ಪ್ರಾಣಿಗಳು, ಪಕ್ಷಿಗಳು ಮತ್ತು ಗಿಡಮರಗಳು ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ಅನುಭವಿಸುತ್ತಿವೆ ಎಂದು ಆರೋಪಿಸಿದ್ದಾರೆ.
ದೂರಿನ ಬಗ್ಗೆ ಸುದ್ದಿಗಾರರು ಕೋತ್ವಾಲಿ ಪೊಲೀಸ್ ಠಾಣೆಯ ಅಧಿಕಾರಿ ರಾಜೇಂದ್ರ ವರ್ಮಾ ಅವರನ್ನು ಸಂಪರ್ಕಿಸಿದಾಗ, ಕಳೆದ ಮೇ 20 ರಂದು ಸೂರ್ಯನ ಬಿಸಿಲಿನ ತಾಪದ ಹೆಚ್ಚಳ ಕುರಿತಂತೆ ದೂರು ದಾಖಲಾಗಿದ್ದು, ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.